ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ : ಇಬ್ಬರು ಮಾಲೀಕರ ಬಂಧನ

ದುರಂತ ಸಂಭವಿಸಿದ ದಿನವೇ ಥೈಲ್ಯಾಂಡ್‌ಗೆ ಪರಾರಿಯಾಗಿದ್ದ ಮಾಲೀಕರು

ಪಣಜಿ : ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡಕ್ಕೆ 25 ಮಂದಿ ಬಲಿಯಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ಮಾಲೀಕರನ್ನು ಪೊಲೀಸರು ಬಂದಿಸಿದ್ದಾರೆ. ದುರಂತ ಸಂಭವಿಸುತ್ತಿದ್ದಂತೆ ಇಬ್ಬರು ಮಾಲೀಕರು ಥೈಲ್ಯಾಂಡ್‌ಗೆ ಪರಾರಿಯಾಗಿದ್ದರು. ಮಾಲೀಕರನ್ನು ಬಂಧಿಸಲಾಗಿದೆ.

ಈ ಘಟನೆಯನ್ನು ಗೋವಾದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.





















































 
 

ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ ದೇಶದಿಂದ ಪಲಾಯನ ಮಾಡಿದ ಲೂತ್ರಾ ಸಹೋದರರ ಒಡೆತನದ ಗೋವಾದ ವಾಗೇಟರ್ ಪ್ರದೇಶದಲ್ಲಿರುವ ರೋಮಿಯೋ ಲೇನ್ ರೆಸ್ಟೋರೆಂಟ್ ಅನ್ನು ಕೆಡವಲಾಗಿದೆ. ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಇದರ ಮಾಲೀಕರು.

ರೋಮಿಯೋ ಲೇನ್ ಬಳಿ ಇರುವ ಅವರ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್ ಡಿಸೆಂಬರ್ 7ರಂದು ಬೆಂಕಿಗೆ ಆಹುತಿಯಾಗಿ 25 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕ್ಲಬ್​ನ ಮಾಲೀಕರನ್ನು ಥೈಲ್ಯಾಂಡ್​ನಲ್ಲಿ ಬಂಧಿಸಲಾಗಿದೆ. ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಹೊಸ ವರ್ಷದ ಆಚರಣೆಗಾಗಿ ಹೆಚ್ಚಿನ ಸಂಖ್ಯೆಯ ಸ್ಥಳೀಯರು ಮತ್ತು ವಿದೇಶಿಯರು ಗೋವಾಕ್ಕೆ ಆಗಮಿಸುತ್ತಿರುವ ಸಮಯದಲ್ಲಿ ಗೋವಾ ನೈಟ್‌ಕ್ಲಬ್ ಬೆಂಕಿ ದುರಂತ ಸಂಭವಿಸಿದೆ.

ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಗೋವಾದ ಅರ್ಪೋರಾದ ಜನಪ್ರಿಯ ನೈಟ್‌ಕ್ಲಬ್‌ನಲ್ಲಿ ಹಲವಾರು ಸುರಕ್ಷತಾ ಅಪಾಯಗಳ ಪರಿಣಾಮವಾಗಿ ಸಂಭವಿಸಿದ ಬೆಂಕಿಯ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಗೋವಾ ಪೊಲೀಸರು ಅವರ ಪಾಸ್‌ಪೋರ್ಟ್‌ಗಳನ್ನು ಅಮಾನತುಗೊಳಿಸಿ ವಿದೇಶಾಂಗ ಸಚಿವಾಲಯವನ್ನು ವಿನಂತಿಸಿದ ಸ್ವಲ್ಪ ಸಮಯದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

error: Content is protected !!
Scroll to Top