ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

ಧಾರವಾಡ: ಸರ್ಕಾರಿ ಆಸ್ಪತ್ರೆಯಲ್ಲಿನ ಜನೌಷಧ ಕೇಂದ್ರ ಮುಚ್ಚುವುದಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೃಯಾಜ್ಞೆ ನೀಡಿದೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ.

ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನೆ ಮಾಡಿ ರಾಕೇಶ್, ಮಹಾಲಿಂಗಪ್ಪ ‌ಮೊದಲಾದವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಲಯ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ರದ್ದು ಮಾಡಿರುವುದಾಗಿದೆ.

120 ಚದರ ಅಡಿ ಜಾಗದಲ್ಲಿ ಜನೌಷಧಿ ಮೂಲಕ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸಿದಲ್ಲಿ ನಿಮಗೇನು ನಷ್ಟ? ಎಂದು ನ್ಯಾಯಾಲಯ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಹಾಗೆಯೇ, ಜನೌಷಧಿಯ ಬಗ್ಗೆ ಯಾರಾದರೂ ದೂರು ನೀಡಿದ್ದಾರೆಯೇ? ಎಂದು ತರಾಟೆಗೆ ತೆಗೆದುಕೊಂಡಿದೆ.





















































 
 

error: Content is protected !!
Scroll to Top