ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ

ಮೂರನೇ ಟಿ20ಯಲ್ಲಿ ಸುಲಭ ಜಯ; ಸರಣಿಯಲ್ಲಿ 2-1 ಮುನ್ನಡೆ

ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಪ್ರಿಕಾ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್‌ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 120 ರನ್‌ ಗಳಿಸಿ ಗೆಲುವು ಸಾಧಿಸಿತು.

ಟೀಂ ಇಂಡಿಯಾ ಪರ ಅಭಿಷೇಕ್‌ ಶರ್ಮಾ 35 ರನ್‌, ಶುಭಮನ್‌ ಗಿಲ್‌ 28 ರನ್‌, ತಿಲಕ್‌ ವರ್ಮಾ ಅಜೇಯ 26 ರನ್‌, ಸೂರ್ಯಕುಮಾರ್‌ ಯಾದವ್‌ 12 ರನ್‌, ಶಿವಂ ದುಬೆ ಅಜೇಯ 10 ರನ್‌ ಗಳಿಸಿದರು.





















































 
 

ಬೌಲಿಂಗ್‌ನಲ್ಲಿ ಆರ್ಷದೀಪ್‌ ಸಿಂಗ್‌, ಹರ್ಷಿತ್‌ ರಾಣಾ, ಕುಲ್‌ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ ತಲಾ ಒಂದೊಂದು ವಿಕೆಟ್‌ ಪಡೆದರು.

ದಕ್ಷಿಣ ಆಫ್ರಿಕಾ ಪರ ನಾಯಕ ಏಡನ್‌ ಮಾರ್ಕ್ರಂ 61 ರನ್‌, ಡೊನೊವಾ ಫೆರೇರಾ 20 ರನ್‌, ಅನ್ರಿಚ್ ನಾರ್ಟ್ಜೆ 12 ರನ್‌ ಗಳಿಸಿದ್ದು ಬಿಟ್ಟರೆ ಉಳಿದೆಲ್ಲರೂ ಒಂದಂಕಿ ಮೊತ್ತಕ್ಕೆ ಔಟಾದರು. ಬೌಲಿಂಗ್‌ನಲ್ಲಿ ಆಫ್ರಿಕಾ ಪರ ಲುಂಗಿ ಎನ್‌ಗಿಡಿ, ಮಾರ್ಕೋ ಜಾನ್ಸೆನ್‌, ಕಾರ್ಬಿನ್‌ ಬಾಷ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾದ ಮೊದಲ ಓವರ್‌ನಿಂದಲೇ ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ಇದರ ಪರಿಣಾಮವಾಗಿ ಆಫ್ರಿಕಾ ತಂಡ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಬಳಿಕವೂ ಆಫ್ರಿಕಾ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ಐಡೆನ್ ಮಾರ್ಕ್ರಾಮ್ ಅರ್ಧಶತಕ ಗಳಿಸಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು.

ಈ ಪಂದ್ಯದಲ್ಲಿ ಭಾರತದ ಎಲ್ಲ ಬೌಲರ್‌ಗಳು ವಿಕೆಟ್ ಪಡೆದರು. ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಭಾರತದ ಪರ ಅಭಿಷೇಕ್ ಮತ್ತು ಶುಭ್‌ಮನ್ ಗಿಲ್ ಸ್ಫೋಟಕ ಆರಂಭ ನೀಡಿದರು. ಇಬ್ಬರು ಬ್ಯಾಟ್ಸ್‌ಮನ್‌ಗಳು ಮೊದಲ ವಿಕೆಟ್‌ಗೆ 60 ರನ್​ಗಳ ಜೊತೆಯಾಟ ನೀಡಿದರು.

error: Content is protected !!
Scroll to Top