ಪಡುಬಿದ್ರೆ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಚ ಘಟನೆ ತೆಂಕ ಎರ್ಮಾಳಿನ ಸತ್ಯಂ ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತೆಂಕ ಎರ್ಮಾಳಿನ ಅಣ್ಣಯ್ಯ ಬಂಗೇರ (67) ಅವರೇ ಮೃತ ದುರ್ದೈವಿ.
ಬೈಕ್ ಸವಾರ ಬಾದಾಮಿ ಮೂಲದ ಹಸನ್ ಅವರು ಕಾಪುವಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಅಣ್ಣಯ್ಯ ಅವರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಸನ್ ಅವರಿಗೂ ತೀವ್ರ ತರದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
























