ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು

ಸಿದ್ದರಾಮಯ್ಯನವರನ್ನು ನಿರ್ದೋಷಿ ಎಂದು ಹೇಳಿದ ಲೋಕಾಯುಕ್ತ ತನಿಖೆ ಮೇಲಿನ ತೀರ್ಪು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್‌ ಕುರಿತು ನ್ಯಾಯಾಲಯ ಇಂದು ತೀರ್ಪು ನೀಡಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ನೀಡುವ ತೀರ್ಪು ಈ ಪ್ರಕರಣಕ್ಕೆ ಸಂಬಂಧಿಸದಂತೆ ಮಹತ್ವದ್ದಾಗಿರಲಿದೆ. ಲೋಕಾಯುಕ್ತ ನೀಡಿದ ಕ್ಲೀನ್‌ಚಿಟ್‌ ಅನ್ನು ನ್ಯಾಯಾಲಯ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ ದೊಡ್ಡದೊಂದು ಗೆಲುವು ಸಿಕ್ಕಿದಂತಾಗುತ್ತದೆ.

ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ. ವಿಚಾರಣೆ ಮುಂದುವರಿಯಬಹುದು. ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ‌ ಹೊರಬೀಳಲಿದೆ.





















































 
 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೂಡಾದಿಂದ ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಖುದ್ದು ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಅವರೇ ವಾದಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಸಹ ತಕರಾರು ಅರ್ಜಿ ಸಲ್ಲಿಸಿತ್ತು.

error: Content is protected !!
Scroll to Top