ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ

ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಬೆನ್ನಲ್ಲೇ ಸಂಜನಾಳ ಹಿನ್ನೆಲೆ ಪರಿಶೀಲಿಸಿದಾಗ ಚಕಿತಗೊಳಿಸುವ ಮಾಹಿತಿಗಳು ಬೆಳಕಿಗೆ ಬಂದಿವೆ.

ಸಂಜನಾ 2 ವರ್ಷಗಳ ಹಿಂದೆ ಕಂಟ್ರ್ಯಾಕ್ಟರ್ ಸತೀಶ್ ರೆಡ್ಡಿ ಎಂಬವರನ್ನು ಪರಿಚಯ ಮಾಡಿಕೊಂಡು, ಅವರನ್ನು ಮನೆಗೆ ಊಟಕ್ಕೆ ಕರೆದು ಅವರ ಜೊತೆ ದೈಹಿಕ ಸಂಪರ್ಕ ಬೆಳೆಸಿ ಅದರ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ ಮಾಡಿದ್ದಳು. ಸತೀಶ್ ರೆಡ್ಡಿ ಬಳಿಯಿದ್ದ ಚಿನ್ನದ ಉಂಗುರ, ಸರ, ಮೂರು ಲಕ್ಷ ನಗದು ಕಸಿದುಕೊಂಡಿದ್ದಳು ಎಂದು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.





















































 
 

ಅದರ ಜೊತೆಗೆ ಸತೀಶ್‌ ರೆಡ್ಡಿಗೆ ಸೇರಿದ 2 ಅಂತಸ್ತಿನ ಕಟ್ಟಡವನ್ನು ತನ್ನ ಹೆಸರಿಗೆ ಬರೆದುಕೊಡು ಎಂದು ಕಿರುಕುಳ ನೀಡಿದ ಆರೋಪದಲ್ಲಿ ಕೆ.ಆರ್‌ ಪುರ ಪೊಲೀಸ್ ಠಾಣೆಯಲ್ಲೂ ಸಂಜನಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2018ರಲ್ಲಿ ಹೆಡ್‌ಕಾನ್ಸ್‌ಟೇಬಲ್ ಜಗದೀಶ್ ಎಂಬವರು ನನ್ನನ್ನು ಮದುವೆ ಮಾಡ್ಕೋತಿನಿ ಅಂತಾ ನಂಬಿಸಿ ದೈಹಿಕ ಸಂಪರ್ಕ ಬೆಳಸಿ ಮೋಸ ಮಾಡಿದ್ದಾರೆ ಅಂತಾ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಳ್ಳು ಆರೋಪ ಎಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತನಿಖೆ ವೇಳೆ ಇದೇ ರೀತಿ ಹಲವರಿಗೆ ಹನಿಟ್ರ್ಯಾಪ್ ಮಾಡಿರೋದು, ಅಧಿಕಾರಿಗಳ ಪರಿಚಯ ಮಾಡ್ಕೊಂಡು ಅವರ ಹೆಸರಿನಲ್ಲಿ ಹಲವರಿಗೆ ಮೋಸ ಮಾಡಿರೋದು ಕೂಡ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

error: Content is protected !!
Scroll to Top