ಹಾವು ಕಡಿತದಿಂದ ಮಹಿಳೆ ಸಾವು

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ. ಇಲ್ಲಿನ ಗುಡ್ಡೆತೋಟ ನಿವಾಸಿ ಪ್ರೇಮ ( ವ. 55) ಮೃತ ಮಹಿಳೆ.

ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರಹಾವು ಕಡಿದಿದೆ. ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ
ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top