ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ

ಸುಳ್ಯ : ಇಲ್ಲಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗೂನಡ್ಕ ಬಳಿ ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ.

ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಪಾರಾಗಿದ್ದಾರೆ.

ಉರುಳಿಬಿದ್ದ ಲಾರಿಯನ್ನು ಜೆಸಿಬಿ ಬಳಸಿ ಮೇಲಕ್ಕೆತ್ತಲಾಯಿತು. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶಿವಮೊಗ್ಗ ಮೂಲದವರು ಎಂದು ತಿಳಿದುಬಂದಿದೆ.





















































 
 
error: Content is protected !!
Scroll to Top