ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ಇದರ ವಾರ್ಷಿಕ ಸಮಾವೇಶ, ಗಣಪತಿ ಹವನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭ ಡಿ. 25 ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಪೂರ್ವಾಹ್ನ 9.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 10. 30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠ ಮಂಗಳೂರಿನ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
ಈ ವರ್ಷದ ವಾರ್ಷಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಮಂದಿ ಸಾಧಕರಿಗೆ ‘ಸಾಧನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ರವಿ ಮುಂಗ್ಲಿಮನೆ ತಿಳಿಸಿದ್ದಾರೆ.
ಪ್ರಶಸ್ತಿ ಪಡೆಯುವವರು:
ಕೃಷಿ ಕ್ಷೇತ್ರ: ಕೆಮ್ಮಾರ ಗಂಗಾಧರ ಗೌಡ
ಸಹಕಾರ ಕ್ಷೇತ್ರ: ಶಿವರಾಮ ಗೌಡ ಇಡ್ಯಪೆ
ಸಾಮಾಜಿಕ ಕ್ಷೇತ್ರ: ರತ್ನಾವತಿ ಜಿ.ವಿ. ಗೌಡ, ಪ್ರಮೋದ್ ಕುಮಾರ್
ಶಿಕ್ಷಣ ಕ್ಷೇತ್ರ: ಎ.ವಿ. ನಾರಾಯಣ
ವೈದ್ಯಕೀಯ ಕ್ಷೇತ್ರ: ಕು. ಧನ್ಯ ಬೈಲಾಡಿ
ಉದ್ಯಮ ಕ್ಷೇತ್ರ: ಸುಂದರ ಗೌಡ ಉಪ್ಪಿನಂಗಡಿ
ಸರ್ಕಾರಿ ವೈದ್ಯಕೀಯ ಕ್ಷೇತ್ರ: ಡಾ. ಯದುರಾಜ್
ಪತ್ರಿಕೋದ್ಯಮ ಕ್ಷೇತ್ರ: ಸಿಂಚನ ಊರುಬೈಲು
ವಿಶೇಷ ಪ್ರತಿಭೆ: ಕು. ಶಮಿಕಾ ಹಿರೇಬಂಡಾಡಿ
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಗೌಡ ಸೇವಾ ಸಂಘದ ನಿಯೋಜಿತ ಅಧ್ಯಕ್ಷ ಸುಂದರ ಗೌಡ ನಡುಬೈಲು, ನಿಯೋಜಿತ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಧರ್ ಪಾಣತ್ತಿಲ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ್ ಗೌಡ ಕಣಜಾಲು, ಮಹಿಳಾ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ಶಶಿಧರ್, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಗೌಡ ಸೇವಾ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
























