ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ

ಬಂಟ್ವಾಳ : ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್‌ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ.





















































 
 

ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕುತ್ತಿದ್ದಾರೆ.

error: Content is protected !!
Scroll to Top