ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ : ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮ ತಾಲೂಕಿನ ಸ. ಹಿ. ಪ್ರಾಥಮಿಕ ಶಾಲೆ, ಮುಳ್ಯ ಅಟ್ಲೂರಿನಲ್ಲಿ ನಡೆಯಿತು.

ಟ್ರಸ್ಟ್‌ನ ಗೌರವ ಅಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು.

ಗೌರವ ಸಲಹೆಗಾರ ಫಾಲಚಂದ್ರ ವೈ.ವಿ, ಸಲಹಾ ಸಮಿತಿ ಸದಸ್ಯೆೋೋ ಡಾ. ಅನುರಾಧಾ ಕುರುಂಜಿ, ಸ್ಥಳೀಯ ಸಮಿತಿಯ ಗೌರವ ಸಂಚಾಲಕ ಶಿವರಾಮ್ ಕೇನಾಜೆ, ಸಂಚಾಲಕ ನಾಗರಾಜ್ ಮುಳ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಅಟ್ಲೂರು, ಶಾಲಾ ಮುಖ್ಯೋಪಾಧ್ಯಾಯ ರವಿಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ, ಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷ ಪ್ರಕಾಶ್ ತೋರಣಗಂಡಿ, ಸೇವ ಸಂಗಮ ಟ್ರಸ್ಟ್ ನ ನಿಯೋಜಿತ ಅಧ್ಯಕ್ಷ ಯಶವಂತ್ ಜಯನಗರ, ಪ್ರಧಾನ ಕಾರ್ಯದರ್ಶಿ ವಿಶ್ವಕಿರಣ್, ಹೇಮನಾಥ, ಸುಜಿತ್ , ಸೌಜನ್ಯ , ಸುಶಾಂತ್ , ಜೀವನ್ , ಗಗನ್, ಭವ್ಯಶ್ರೀ , ಪುನೀತ್ , ಚರಿತ್, ತೀರ್ಥೇಶ್ , ಶೇಖರ್ ಅಟ್ಲೂರು ಮೊದಲಾದವರು ಉಪಸ್ಥಿತರಿದ್ದರು.





















































 
 

ಈ ಸಂದರ್ಭದಲ್ಲಿ ದಶಮಾನೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆ ನಡೆಯಿತು. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ ಕಾರ್ಯಕ್ರಮದ ಯಶಸ್ಸಿಗೆ ಹಲವು ಸಮಿತಿಗಳನ್ನು ರೂಪುಗೊಳಿಸಲಾಯಿತು, ದಶಮಾನೋತ್ಸವ ಕಾರ್ಯಕ್ರಮವನ್ನು “ಮುಳ್ಯೋತ್ಸವ” ಎಂಬ ಶೀರ್ಷಿಕೆಯಡಿಯಲ್ಲಿ ನಡೆಸಲು ತೀರ್ಮಾನಿಸಿದ್ದು ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಲಾಯಿತು.

error: Content is protected !!
Scroll to Top