ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಸಮೀಪ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ ಮಾಡಿದ್ದಾರೆ.
ಸೀ ಬರ್ಡ್ ಬಸ್ಸು ಮತ್ತು ಕಂಟೇನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಈ ಅಪಘಾತದಲ್ಲಿ ಸುಮಾರು 21 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಸುಮಾರು 17 ಜನರು ಮೃತಪಟ್ಟಿದ್ದಾರೆ. ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
























