ಬೆಂಗಳೂರು: ಕೆಲಸದ ವಿಷಯಕ್ಕೆ ದಂಪತಿ ನಡುವೆ ನಡೆದ ಜಗಳ ಪತ್ನಿಯ ಹತ್ಯೆಯಲ್ಲಿ ಅಂತ್ಯವಾದ ಘಟನೆ ಸಂಪಿಗೆಹಳ್ಳಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಆಯೆಷಾ ಸಿದ್ದಿಕಿ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಸೈಯದ್ ಜಬಿ ಪೊಲೀಸರಿಗೆ ಶರಣಾಗಿದ್ದಾನೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ಇವರಿಬ್ಬರ ವಿವಾಹವಾಗಿತ್ತು. ಆಯೆಷಾಗೆ ಇದು ಮೂರನೇ ಮದುವೆಯಾಗಿದ್ದು, ಆಕೆಯ ವೃತ್ತಿಗೆ ಸಂಬಂಧಿಸಿದಂತೆ ಪತಿ ಅಸಮಾಧಾನ ಹೊಂದಿದ್ದ. ಆಯೆಷಾ ಮಸಾಜ್ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದು, ಇದು ಸೈಯದ್ಗೆ ಇಷ್ಟವಿರಲಿಲ್ಲ. ಕೆಲಸ ಬಿಡುವಂತೆ ಆಕೆಗೆ ಒತ್ತಡ ಹೇರುತ್ತಿದ್ದರೂ ಆಕೆ ಅದಕ್ಕೆ ಸಮ್ಮತಿ ಸೂಚಿಸಿರಲಿಲ್ಲ.
ಇದೇ ವಿಷಯಕ್ಕೆ ಆರಂಭವಾದ ಜಗಳ ತಾರಕಕ್ಕೇರಿದ್ದು, ಸೈಯದ್ ತನ್ನ ಪತ್ನಿ ಆಯೆಷಾಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಯಲಹಂಕ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಈ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























