ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
ಉಡುಪಿ : ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ.
ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯೊಂದಿಗೆ ಇಡೀ ಕಟ್ಟಡವೇ ಹೊತ್ತಿ ಉರಿದಿದೆ. ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಹೋಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
























