ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ

ಸುಳ್ಯ: ಆಟೋರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಎಂಬವರನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಮತ್ತು ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ ಯಾನೆ ಮನು (42)ಬಂದಿತ ಆರೋಪಿಗಳು.

ಅಬ್ದುಲ್ ಜಬ್ಬಾರ್ ಎಂಬವರನ್ನು 2025ರ ಅಕ್ಟೋಬರ್‌ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕಳುಹಿಸಿದ್ದರು. 2025ರ ಅ.17 ರಂದು ಪಿರ್ಯಾದುದಾರರ ಗಂಡ ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಅಬ್ದುಲ್ ಜಬ್ಬಾರ್‌ನ ಸಾವಿಗೆ ರಫೀಕ್ ಪಡು ಮತ್ತು ಇತರರು ಕಾರಣ ಎಂಬುದಾಗಿ ಅ.18 ರಂದು ಅಬ್ದುಲ್‌ ಜಬ್ಬಾರ್‌ ಪತ್ನಿ ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ನೀಡಮದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.





















































 
 

ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಅವರು ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿರುವುದರಿಂದ ಪ್ರಸ್ತುತ ಈ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿರುತ್ತದೆ.

error: Content is protected !!
Scroll to Top