ಬಂಟ್ವಾಳ: ಯುವಕನೊಬ್ಬ ಮನೆಯ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.
ಪ್ರವೀಣ್ (26) ಎಂಬವರೇ ಮೃತ ದುರ್ದೈವಿ.
ಪ್ರವೀಣ್ ಅವರು ಊಟ ಮುಗಿಸಿ ಮಹಡಿಯ ಮೇಲೆ ತೆರಳಿ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕೆಳಕ್ಕೆ ಅಯ ತಪ್ಪಿ ಬಿದ್ದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ತಕ್ಷಣವೇ ಅವರನ್ನು ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದರೆ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾದ ಕಾರಣ ಅದಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ.
ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
























