ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು

ಮತ ಚಲಾವಣೆಯಾಗುವುದಕ್ಕೂ ಮೊದಲೇ ಮಹಾಯುತಿ ಪಾಳಯದಲ್ಲಿ ಸಂಭ್ರಮ

ಮುಂಬೈ: ಸುದೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಸು ಪಡೆದಿದ್ದರಿಂದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಲ್ಯಾಣ್-ಡೊಂಬಿವಿಲಿ ಮಹಾನಗರ ಪಾಲಿಕೆಯಲ್ಲಿ ಗರಿಷ್ಠ ಅಂದರೆ 21 ಮಹಾಯುತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ 15 ಮಂದಿ ಬಿಜೆಪಿ ಮುಖಂಡರು ಹಾಗೂ ಆರು ಮಂದಿ ಶಿವಸೇನೆಗೆ ಸೇರಿದವರು.





















































 
 

ಎರಡೂ ಮೈತ್ರಿಕೂಟಗಳ ಭದ್ರಕೋಟೆ ಎನಿಸಿದ ಉತ್ತರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ತಲಾ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, 12 ಸ್ಥಾನಗಳು ಮಹಾಯುತಿ ಕೂಟಕ್ಕೆ ಲಭ್ಯವಾಗಿವೆ. ಇದೇ ಪ್ರವೃತ್ತಿ ಎಂಎಂಆರ್‌ನ ಪನ್ವೇಲ್‌ನಲ್ಲೂ ಮುಂದುವರಿದಿದ್ದು, ಏಳು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶರದ್ ಪವಾರ್ ಅವರ ಎನ್‌ಸಿಪಿಯ ಭದ್ರಕೋಟೆ ಎನಿಸಿದ ಭಿವಂಡಿ ಪಾಲಿಕೆಯಲ್ಲೂ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಏಕನಾಥ್ ಶಿಂಧೆ ಅವರ ಸ್ವಕ್ಷೇತ್ರ ಥಾಣೆಯಲ್ಲಿ ಮೇಲ್ನೋಟಕ್ಕೆ ಬಿಜೆಪಿ ಹಾಗೂ ಶಿವಸೇನೆ ನಡುವೆ ಜಗಳ ಕಂಡುಬಂದಿದ್ದರೂ, ಶಿವಸೇನೆಯ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿರುವ ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್, ಜಿಲ್ಲೆಯಲ್ಲಿ ಪ್ರತಿಭಟನೆಯನ್ನೂ ನಡೆಸಿದೆ.

error: Content is protected !!
Scroll to Top