ಧರ್ಮಸ್ಥಳ ಕೇಸ್‌ : ಪೂರ್ಣ ತನಿಖಾ ವರದಿ ಸಲ್ಲಿಸಲು ಕೋರ್ಟ್‌ ಆದೇಶ

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿತ್ತು. ಶನಿವಾರ ನಡೆದ ವಿಚಾರಣೆ ವೇಳೆ ಆದಷ್ಟು ಶೀಘ್ರವಾಗಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್‌.ಟಿ ಆದೇಶಿಸಿ ಜ.23ಕ್ಕೆ ವಿಚಾರಣೆಯನ್ನು ಮುಂದೂಡಿದರು.

ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಎಸ್ಐಟಿ ಎಸ್‌ಪಿ ಸಿ.ಎ.ಸೈಮನ್, ಡಿವೈಎಸ್‌ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಎಸ್‌ಐಟಿಯ ತನಿಖಾ ವರದಿಯಲ್ಲಿ 6 ಮಂದಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬುದನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ.





















































 
 
error: Content is protected !!
Scroll to Top