ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಾರು ಚಾಲಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಸಚಿವೆ ‌ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಹಾಡು ಹಗಲೇ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.

ಇರಿತಕ್ಕೊಳಗಾದವರನ್ನು ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಎಂದು ಗುರುತಿಸಲಾಗಿದೆ. ಅವರ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.





















































 
 

error: Content is protected !!
Scroll to Top