ನಮಾಜ್‌ಗೆ ತೆರಳಿದ್ದ ಮಸೀದಿಯಲ್ಲೇ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಾವು

ಮಹಾರಾಷ್ಟ್ರ: ಮಸೀದಿಯಲ್ಲಿ ನಮಾಜ್ ಸಲ್ಲಿಸಲು ತೆರಳಿ ಇದ್ದ ವೇಳೆ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪ್ರಕರಣದ ಆರೋಪಿ ಪೊಲೀಸರ ಬಂಧನದಲ್ಲಿದ್ದಾನೆ.

ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಗೆ ಹಿದಾಯತುಲ್ಲಾ ಅವರು ನಮಾಜ್ ಸಲ್ಲಿಸಲು ಮಧ್ಯಾಹ್ನ ಸುಮಾರು 1.30 ಕ್ಕೆ ತೆರಳಿದ್ದರು. ಈ ವೇಳೆ ಹಳೆ ವೈಷಮ್ಯದಿಂದ ‌ಆರೋಪಿ ಅವರಿಗೆ ಚಾಕು ಇರಿದಿದ್ದ. ಈ ಘಟನೆಯಲ್ಲಿ ಅವರ ಕತ್ತು, ಎದೆಗೆ ತೀವ್ರ ಪ್ರಮಾಣದಲ್ಲಿ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.





















































 
 

ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ವಿಧಿವಿಜ್ಞಾನ ಅಧಿಕಾರಿಗಳ ಸಹಾಯದಿಂದ ಸಾಕ್ಷ್ಯ ಸಂಗ್ರಹಿಸಿ, ಆರೋಪಿಯನ್ನು ಬಂಧಿಸಿದ್ದರು.

error: Content is protected !!
Scroll to Top