KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ

ಪುತ್ತೂರು: KSRTC ಯ ನಿವೃತ್ತ ನೌಕರ ಪರಮೇಶ್ವರ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿ. ದ ಮಂಗಳೂರು ವಿಭಾಗದಲ್ಲಿ 20 ವರ್ಷಗಳ ಕಾಲ ನಿರ್ವಾಹಕರಾಗಿ, ಪುತ್ತೂರು ಬಸ್ಸು ನಿಲ್ದಾಣದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ ನಂತರ ಪುತ್ತೂರು ಘಟಕದ ಸಹಾಯಕ ಸಂಚಾರ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸಂಸ್ಥೆಯಲ್ಲಿ ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಇವರು 2023 ರ ಮಾರ್ಚ್‌ನಲ್ಲಿ ವೃತ್ತಿಯಿಂದ ನಿವೃತ್ತರಾಗಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.





















































 
 

error: Content is protected !!
Scroll to Top