ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಪೆರ್ನೆ ವಲಯದ ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕೆದಿಲ ಶ್ರೀ ದೇವಿ ಮಂದಿರದಲ್ಲಿ ನಡೆಯಿತು.

ಹಿರಿಯ ಸದಸ್ಯೆ ಭಾಗಿರತಿ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನವಿಕಾಸ ಕೇಂದ್ರಕ್ಕೆ ಶುಭ ಹಾರೈಸಿದರು.

ಒಕ್ಕೂಟದ ಉಪಾಧ್ಯಕ್ಷರು ಮಾತನಾಡಿ, ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಮಾಹಿತಿ ದೊರೆಯುತ್ತಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.





















































 
 

ತಾಲೂಕು ವಿಚಕ್ಷಣಧಿಕಾರಿ ಭಾಗವಹಿಸಿ ಸಂಸ್ಕಾರ ಸಂಸ್ಕೃತಿ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ ಅವರು ವಹಿಸಿದ್ದರು.

ಕೇಂದ್ರದ ಸದಸ್ಯರು, ಶೌರ್ಯ ತಂಡದ ಸದಸ್ಯರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಬಹುಮಾನ ವಿತರಣೆ ಮಾಡಲಾಯಿತು.

ಜ್ಞಾನವಿಕಾಸ ಸಮನ್ವಯಧಿಕಾರಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸೇವಾ ಪ್ರತಿನಿಧಿ ಜಯಂತಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಶಾರದಾ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯೆ ಸ್ವಾತಿ ವಂದಿಸಿದರು.

error: Content is protected !!
Scroll to Top