ವಿಟ್ಲ : ಮೇಯಲು ಬಿಟ್ಟಿದ್ದ ಹಸುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ (30) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು, ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

