ಈ ಸಲ ಭಾನುವಾರ ಕೇಂದ್ರ ಬಜೆಟ್‌ ಮಂಡನೆ

ಜನವರಿ 28ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಪ್ರಾರಂಭ

ನವದೆಹಲಿ: ಕೇಂದ್ರ ಬಜೆಟನ್ನು ಫೆ.1ರಿಂದ ಮಂಡಿಸುವುದು ಕಳೆದ ಕೆಲವು ವರ್ಷಗಳಿಂದ ಪಾಲಿಸಿಕೊಂಡು ಬಂದ ವಾಡಿಕೆ. ಆದರೆ ಈ ಸಲ ಫೆ.1 ಭಾನುವಾರ ಬರಲಿದೆ. ಹೀಗಾಗಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್‌ ಮಂಡನೆಯಾಗಲಿದೆ. 2025-26ನೇ ಸಾಲಿನ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಫೆಬ್ರವರಿ 1ರ ಭಾನುವಾರದಂದೇ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.

ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಬಿಡುಗಡೆ ಮಾಡಲಿದ್ದಾರೆ.





















































 
 

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇದಕ್ಕೆ ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತವು ಮಾರ್ಚ್ 9ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ಮುಂದುವರಿಯಲಿದೆ.

ಬಜೆಟ್ ಅಧಿವೇಶನದ ಬಿಡುವು ಇಲಾಖೆಗೆ ಸಂಬಂಧಿಸಿದ ಸ್ಥಾಯಿ ಸಮಿತಿಗಳಿಗೆ ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನ ಬೇಡಿಕೆಗಳನ್ನು ಪರಿಶೀಲಿಸಲು ಸಹಾಯ ಮಾಡುತ್ತದೆ.

error: Content is protected !!
Scroll to Top