ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.
ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ. ಅಂತೆಯೇ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಕಲ್ಪ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್‌ ಹೇಳಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top