ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ

ದೈಹಿಕ, ಮಾನಸಿಕ ಹಿಂಸೆ ನೀಡಿದ ನಾಲ್ವರ ವಿರುದ್ಧ ಕೇಸ್‌

ಮಂಗಳೂರು : ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಭಾವಿಸಿ ನಾಲ್ವರು ವ್ಯಕ್ತಿಗಳು ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಹಲ್ಲೆ ಮಾಡಿದವರು ಎಂದು ಗುರುತಿಸಲಾಗಿದೆ.

ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ನಾಲ್ವರು ಆರೋಪಿಗಳು ಸತತವಾಗಿ, ನೀನು ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಹಲ್ಲೆ ನಡೆಸುತ್ತಿದ್ದರು. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ.





















































 
 

ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ಗಿರಿಜಾ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ 307 ಪ್ರಕರಣ ದಾಖಲಾಗಿದ್ದು, ಎಲ್ಲರನ್ನೂ ಗುರುತಿಸಲಾಗಿದೆ. ಅವರನ್ನು ತಕ್ಷಣ ಬಂಧಿಸಲು ಸೂಚನೆಗಳನ್ನು ಪೊಲೀಸ್ ಆಯುಕ್ತರು ನೀಡಲಾಗಿದೆ.

error: Content is protected !!
Scroll to Top