ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು

ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದ ಉದ್ಯಮಿ

ಮಂಗಳೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲದ ಅಯ್ಯಪ್ಪ ವ್ರತಧಾರಿಯೋರ್ವರು ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ವ್ಯಕ್ತಿ.

ಚಂದ್ರಹಾಸ್ ಅವರು ಅಯ್ಯಪ್ಪ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಗ್ಗೆ ಚಂದ್ರಹಾಸ್ ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಂದ್ರಹಾಸ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.





















































 
 

ಮೃತ ಚಂದ್ರಹಾಸ್ ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಪುತ್ರಿಯ ವಿವಾಹವನ್ನು ನಡೆಸಿದ್ದರು.

error: Content is protected !!
Scroll to Top