ಖೈದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಧಾರವಾಡ: ಪತ್ನಿಯನ್ನು ಹತ್ಯೆಗೈದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖೈದಿ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತನನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ.

ಪತ್ನಿ ಕೊಲೆಗೆ ಸಂಬಂಧಿಸಿದ ಹಾಗೆ ಈಶ್ವರಪ್ಪ ಅವರಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದ್ದು, ಅದರಲ್ಲಿ 7 ವರ್ಷಗಳನ್ನು ಕಳೆದಿದ್ದರು. ಕೆಲಸ ಮುಗಿದ ಬಳಿಕ ಅವರು ತಮ್ಮ ಸೆಲ್ ‌ಗೆ ಮರಳದೇ ಇದ್ದು ಜೈಲು ಸಿಬ್ಬಂದಿ ಹುಡುಕಾಟ ನಡೆಸಿದಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದ ‌ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಟ್ಟಡ ಕಾಮಗಾರಿಗೆ ಬಳಕೆ ಮಾಡುವ ಹಗ್ಗದಿಂದಲೇ ಅವರು ಆತ್ಮಹತ್ಯೆ ಮಾಡಿದ್ದಾಗಿ ತಿಳಿದು ಬಂದಿದೆ.





















































 
 

ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಆ ವೇಳೆಗೆ ಅವರು ಮೃತರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಉಪನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

error: Content is protected !!
Scroll to Top