ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ

ರಾತ್ರಿಯಿಡೀ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಭವ್ಯ ಪರ್ಯಾಯ ಮೆರವಣಿಗೆ

ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಡಗರದಿಂದ ನೆರವೇರಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಿದ್ದು, ಅತ್ಯಂತ ಎಳೆಯ ಪ್ರಾಯದಲ್ಲೇ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾಧಿಕಾರವನ್ನು ಅವರು ನಿರ್ವಹಿಸಲಿದ್ದಾರೆ. ಇದು ಕೃಷ್ಣ ಮಠದ 253ನೇ ಪರ್ಯಾಯ ಮಹೋತ್ಸವವಾಗಿದ್ದು, ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಉಡುಪಿಯಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಂಭ್ರಮ ಮುಗಿಲು ಮುಟ್ಟಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ನಸುಕಿನ ವೇಳೆ ಸಂಪನ್ನಗೊಂಡಿತು.





















































 
 

ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣನ ಪೂಜಾಧಿಕಾರ ಪಡೆದರು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ನಾಲ್ಕನೇ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಸಮಾಪನವಾಯಿತು.

ಇದು ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿ 253ನೇ ದ್ವೈವಾರ್ಷಿಕ ಪರ್ಯಾಯವಾಗಿದೆ. ನಸುಕಿನ ಜಾವ 1.30ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀ ವೇದವರ್ಧನ ಶ್ರೀಗಳ ಪವಿತ್ರ ಸ್ನಾನ ನಡೆಯಿತು. ಪ್ರಾತಃಕಾಲ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಯಿರು. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಭಾಗಿಯಾದವು.

ಮೆರವಣಿಗೆಯ ಕೊನೆಯಲ್ಲಿ ಅಷ್ಟಮಠಾಧೀಶರ ಪಲ್ಲಕ್ಕಿ ಮೆರವಣಿಗೆ ಗಮನ ಸೆಳೆಯಿತು. ಹೆಗಲುಕೊಟ್ಟು ಹೊರುವ ಮೇನೆಯಲ್ಲಿ ಪರ್ಯಾಯ ಮಠಾಧೀಶರು ಬಂದಿದ್ದರೆ ಮೆರವಣಿಗೆಯ ಕೊನೆಯಲ್ಲಿ ಅಷ್ಟಮಠಾಧೀಶರ ಪಲ್ಲಕ್ಕಿ ಮೆರವಣಿಗೆ ನಡೆದು ಬಂದವು. ಟ್ಯಾಬ್ಲೋಗಳ ಜೊತೆಗೆ ಕೀರ್ತಿಶೇಷ ಶ್ರೀ ಲಕ್ಷ್ಮೀವರ ತೀರ್ಥರ ಪ್ರತಿಕೃತಿ ಮೆರವಣಿಗೆ ಕೂಡ ಕಂಡುಬಂದಿತ್ತು. ಬೆಳಗ್ಗಿನ ಜಾವ ನಡೆದ ಅದ್ದೂರಿ ಮೆರವಣಿಗೆಯನ್ನು ಭಕ್ತರು ರಾತ್ರಿಯಿಡೀ ಕಾದು ಕಣ್ತುಂಬಿಕೊಂಡಿದ್ದಾರೆ. ಪ್ರಾತಃಕಾಲ 5.45 ಮಹೂರ್ತದಲ್ಲಿ ಅಕ್ಷಯ ಪಾತ್ರೆ ಹಸ್ತಾಂತರ ಮಾಡಲಾಯಿತು.

ರಾತ್ರಿ ಉಡುಪಿ ನಗರದ 15ಕ್ಕೂ ಅಧಿಕ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಅನೇಕ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಭಾಗಿಯಾಗಿದ್ದರು.

error: Content is protected !!
Scroll to Top