ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ನಡೆಸಿದ 2025 – 2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಹಾಜರಾದ ಸವಣೂರು ವಿದ್ಯಾರಶ್ಮಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ 23ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಾಗಿದೆ.
9ನೇ ತರಗತಿಯ ಆಯಿಷತ್ ಜಸ್ನ – 461, ದ್ಯಾನ್ – 446, ಫಾತಿಮತ್ ಶೈಮ – 460, ಹೃತೇಶ್ ಬಿ. ಎಸ್. – 480, ಲಿಬಾ ಫಾತಿಮ – 443, ಹೈಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಥಮ ಶ್ರೇಣಿಯಲ್ಲಿ 9 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಚಾಲಕ ಸಹಕಾರ ರತ್ನ, ಸವಣೂರು ಸೀತಾರಾಮ ರೈ , ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ಅಭಿನಂದಿಸಿದರು. ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
























