ಕಾಂಗ್ರೆಸ್ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದ ಶಶಿ ತರೂರ್?

ತಿರುವನಂತಪುರಂ: ಕೇರಳದ ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವ ಪಕ್ಷದ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದಂತಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಯಿಂದ ಅವರು ದೂರ ಉಳಿದಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊಚ್ಚಿಗೆ ಆಗಮಿಸಿದ್ದ ಸಂದರ್ಭದಲ್ಲಿ ತಮಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂಬ ಕಾರಣಕ್ಕೆ ತರೂರ್ ಅಸಮಾಧಾನಗೊಂಡಿದ್ದಾರೆ. ಕೆಲವು ತಿಂಗಳುಗಳಿಂದ ತರೂರ್ ಅವರು ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರಿಂದ ಅಂತರ ಕಾಪಾಡಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಸಂಪರ್ಕ ಇರಿಸಿಕೊಂಡಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಈ ನಡುವೆಯೇ ಅವರು ಕಾಂಗ್ರೆಸ್‌ನ ಚುನಾವಣಾ ಸಂಬಂಧಿ ಸಭೆಗೆ ಗೈರಿ ಹಾಜರಾಗುವ ಮೂಲಕ ಮತ್ತೆ ಸಾರ್ವಜನಿಕ ವಲಯದಲ್ಲಿ ಸಂದೇಹ ಸೃಷ್ಟಿ ಮಾಡಿದ್ದಾರೆ.

ಈ ವರ್ಷದ ಕೊನೆಗೆ ನಡೆಯುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹಾಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಸಭೆ ನಡೆಸಲಿದ್ದು, ಈ ಸಭೆಯಿಂದ ತರೂರ್ ಅಂತರ ಕಾಯ್ದುಕೊಂಡಿರುವುದಾಗಿದೆ.





















































 
 

error: Content is protected !!
Scroll to Top