ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ

ಭರತ್‌ ರೆಡ್ಡಿ ಬೆಂಬಲಿಗರು ಬೆಂಕಿ ಹಚ್ಚಿರುವ ಆರೋಪ

ಬಳ್ಳಾರಿ : ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬ್ಯಾನರ್‌ ಗಲಾಟೆ ಮತ್ತು ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ ಪ್ರಕರಣದ ಕಾವು ತಣ್ಣಗಾಗುವ ಮೊದಲೇ ಇನ್ನೊಂದು ಘಟನೆ ಸಂಭವಿಸಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಜಂಟಿ ಹೆಸರಿನಲ್ಲಿದ್ದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮೋಡೆಲ್ ಹೌಸ್‌​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.





















































 
 

ಈ ಮೋಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಈ ಹೌಸ್ ಒಟ್ಟು 109 ಎಕರೆ ಟೋಟಲ್ G ಸ್ವ್ಕೇರ್ ಹೊಂದಿದೆ. ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇವೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮೋಡೆಲ್ ಹೌಸ್ ನಿರ್ಮಿಸಿದ್ದೆವು. ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನು ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದಿದ್ದಾರೆ.

ಮೋಡಲ್​ ಹೌಸ್​ಗೆ ಪೆಟ್ರೋಲ್​, ಡೀಸೆಲ್​ ಹಾಕಿ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಶಾಸಕ ಭರತ್​ ರೆಡ್ಡಿ ಬೆಂಬಲಿಗರೇ ಇದನ್ನು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಕೂಡ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ, ಪೊಲೀಸ್​ ಠಾಣೆಗೆ ದೂರು ನೀಡುತ್ತೇವೆ ಎಂದರು. ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ.ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

error: Content is protected !!
Scroll to Top