ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ

ಸರಣಿ ವಶಪಡಿಸಿಕೊಳ್ಳಲು ಭಾರತ ತವಕ ; ನ್ಯೂಜಿಲೆಂಡ್‌ಗೆ ಗೆಲ್ಲುವ ಅನಿವಾರ್ಯತೆ

ಗುವಾಹಟಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದಿದ್ದು, ಮೂರನೇ ಪಂದ್ಯವನ್ನು ಗೆದ್ದರೆ ಸರಣಿ ಕೈವಶವಾಗಲಿದೆ. ಸರಣಿಯನ್ನು ಜೀವಂತವಾಗಿಡುವ ಸಲುವಾಗಿ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡ ನ್ಯೂಜಿಲೆಂಡ್‌ ಮೇಲಿದೆ. ಕಳೆದೆರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತವನ್ನು ಮಣೀಸಲೇಬೇಕಾದ ಅನಿವಾರ್ಯತೆ ಕೊವೀಸ್‌ಗಳಿಗಿದೆ.





















































 
 

ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಭಾರತ ತಂಡದಲ್ಲಿ ಕಣಕ್ಕಿಳಿಯಬಹುದು. ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ. ಏಳನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಬೌಲರ್​​ಗಳಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

error: Content is protected !!
Scroll to Top