ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ

ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದರು.





















































 
 

ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಬರುವಾಗ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

error: Content is protected !!
Scroll to Top