ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ: ಡಿ. ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯತ್‌ಗಳಿಗೆ ಗಾಂಧೀಜಿ ಅವರ ಹೆಸರನ್ನು ಮರು ನಾಮಕರಣ ಮಾಡುವ ಮೂಲಕ ಅವರ ತತ್ವಗಳನ್ನು ಶಾಶ್ವತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿ ಸಿ ಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅವರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಮನ್‌ರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಕೇಂದ್ರ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲು ಪ್ರಯತ್ನ ನಡೆಸುತ್ತಿದೆ. ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಇದರ ವಿರುದ್ಧ ನಾವು ಜೈಲು ಸೇರುವುದಕ್ಕೂ ‌ಸಿದ್ಧರಿದ್ದೇವೆ. ಈ ಸಂಬಂಧ ತಕ್ಷಣವೇ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.





















































 
 
error: Content is protected !!
Scroll to Top