ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ಅರಿಜಿತ್‌ ಸಿಂಗ್‌ ದಿಢೀರ್‌ ವಿದಾಯ

ಇನ್ನು ಮುಂದೆ ಸಿನಿಮಾಗಳಿಗೆ ಹಾಡುವುದಿಲ್ಲ ಎಂದು ಘೋಷಿಸಿದ ಖ್ಯಾತ ಯುವ ಗಾಯಕ

ಮುಂಬೈ: ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಏಕಾಏಕಿ ನಿವೃತ್ತಿ ಘೋಷಿಸಿದ್ದಾರೆ. ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಇನ್ನೂ 38ರ ಹರೆಯದ ಅರಿಜಿತ್ ಸಿಂಗ್‌ ಹಿನ್ನೆಲೆ ಗಾಯನಕ್ಕೆ ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್​ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಧ್ವನಿಯಲ್ಲಿ ಹೊಸ ಹೊಸ ಹಾಡುಗಳನ್ನು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಈಗ ಶಾಕ್ ಆಗಿದೆ.

ಅರಿಜಿತ್ ಸಿಂಗ್ ಅವರು ಸೋಶಿಯಲ್ ಮೀಡಿಯಾ ಮೂಲಕ ಈ ನಿರ್ಧಾರ ತಿಳಿಸಿದ್ದಾರೆ. ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು ಎಂದು ಅರಿಜಿತ್ ಸಿಂಗ್ ಪೋಸ್ಟ್ ಮಾಡಿದ್ದಾರೆ.





















































 
 

ದೇವರು ನನಗೆ ಕರುಣಾಮಯನಾಗಿದ್ದ. ನಾನು ಒಳ್ಳೆಯ ಸಂಗೀತದ ಅಭಿಮಾನಿ. ಮುಂದಿನ ದಿನಗಳಲ್ಲಿ ಹೆಚ್ಚು ಕಲಿಯುತ್ತೇನೆ. ಚಿಕ್ಕ ಕಲಾವಿದನಾಗಿ ಇನ್ನಷ್ಟು ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಈಗಾಗಲೇ ಒಪ್ಪಿಕೊಂಡ ಕೆಲಸಗಳನ್ನು ನಾನು ಮುಗಿಸಬೇಕಿದೆ. ಅವುಗಳನ್ನು ಪೂರ್ಣಗೊಳಿಸುತ್ತೇನೆ. ಹಾಗಾಗಿ ಈ ವರ್ಷ ನಿಮಗೆ ಕೆಲವು ಹೊಸ ಹಾಡುಗಳು ಸಿಗುತ್ತವೆ. ಆದರೆ ಒಂದು ಸ್ಪಷ್ಟನೆ, ಸಂಗೀತದ ಕೆಲಸವನ್ನು ನಾನು ನಿಲ್ಲಿಸುವುದಿಲ್ಲ ಎಂದು ಅರಿಜಿತ್ ಸಿಂಗ್ ಹೇಳಿದ್ದಾರೆ. ಭವಿಷ್ಯದಲ್ಲಿ ಸಂಗೀತವನ್ನು ಹೆಚ್ಚು ನಿಕಟವಾಗಿ ಅಧ್ಯಯನ ಮಾಡಲು ಬಯಸುವುದಾಗಿ ತಿಳಿಸಿದ್ದಾರೆ. ಅರಿಜಿತ್ ಸಿನಿಮಾಗಳ ಹಾಡುಗಳನ್ನು ಹಾಡುವುದಿಲ್ಲ. ಆದರೆ ಅವರು ಕಾನ್ಸರ್ಟ್​​ಗಳನ್ನು ನೀಡುವುದನ್ನು ಮುಂದುವರಿಸುತ್ತಾರೆ. ಅರಿಜಿತ್ ಅವರು ಈ ಹಿಂದೆ ಕೆಲಸ ಮಾಡಿದ ಹಾಡುಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ ಎಂದು ತಿಳಿಸಿದ್ದಾರೆ. ಅದರ ನಂತರ, ಅರಿಜಿತ್ ಸಿನಿಮಾ ಹಾಡುಗಳನ್ನು ಹಾಡುವುದು ಕಂಡುಬರುವುದಿಲ್ಲ.

ಅವರು ಬಾಲಿವುಡ್‌ಗೆ ಅನೇಕ ಉತ್ತಮ ಹಾಡುಗಳನ್ನು ನೀಡಿದ್ದಾರೆ. ‘ಅಗರ್ ತುಮ್ ಸಾಥ್ ಹೋ’, ‘ಲೆಹರಾ ದೋ’, ‘ಹಮಾರಿ ಅಧುರಿ ಕಹಾ’ ಸೇರಿದಂತೆ ಅನೇಕ ಹಾಡುಗಳು ಸೇರಿವೆ. ಅವರು ರಾತ್ರೋರಾತ್ರಿ ಸೂಪರ್ ಹಿಟ್ ಆದವರಲ್ಲ. ಕನ್ನಡದಲ್ಲಿ ‘ನಿನ್ನಿಂದಲೇ’ ಸಿನಿಮಾದ ‘ಮೌನ ತಾಳಿತೆ..’ ಹಾಡು ಅರಿಜಿತ್ ಸಿಂಗ್ ಅವರ ಕಂಠದಲ್ಲಿ ಮೂಡಿಬಂದಿತ್ತು. ಹಿಂದಿ ಮಾತ್ರವಲ್ಲದೇ ಬೆಂಗಾಲಿ, ತಮಿಳು, ತೆಲುಗು ಹಾಡುಗಳನ್ನು ಅವರು ಹಾಡಿದ್ದಾರೆ.

error: Content is protected !!
Scroll to Top