ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್‌ ಪವಾರ್‌ಗೆ ಗಂಭೀರ ಗಾಯ, ಐವರು ಸಾವು

ಪುಣೆ ಸಮೀಪ ಬಾರಾಮತಿಯಲ್ಲಿ ಸಂಭವಿಸಿದ ಅವಘಡ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ ವಿಮಾನ ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಪತನಗೊಂಡು ಅಜಿತ್‌ ಪವಾರ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಬಂದಿಲ್ಲ. ಆದರೆ ಇಂದು ಬೆಳಗ್ಗೆ ಸಂಭವಿಸಿದ ವಿಮಾನ ಪತನ ಅವಘಡದಲ್ಲಿ ಅಜಿತ್‌ ಪವಾರ್‌ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸವೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ವಿಮಾನ ಬೆಂಕಿಹತ್ತಿಕೊಂಡು ಉರಿಯುತ್ತಿರುವ ದೃಶ್ಯಗಳು ಹರಿದಾಡುತ್ತಿವೆ. ಇದರ ಸಾಚಾತನದ ಇನ್ನೂ ದೃಢಪಟ್ಟಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.





















































 
 
error: Content is protected !!
Scroll to Top