ವಿಮಾನ ಅವಘಡದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ದುರ್ಮರಣ

ಮುಂಬೈ: ಎನ್‌ಸಿಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಗ್ಗೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಲ್ಯಾಂಡಿಂಗ್‌ಗೆ ಯತ್ನಿಸುತ್ತಿದ್ದಾಗ ಭೀಕರವಾಗಿ ಪತನಗೊಂಡಿದೆ. ಅಜಿತ್ ಪವಾರ್ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

66 ವರ್ಷದ ಅಜಿತ್ ಪವಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಹಾಗೂ ಅವರ ವೈಯಕ್ತಿಕ ಸಹಾಯಕ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎನ್ನಲಾಗಿದೆ.

ವಿಮಾನ ಸಂಪೂರ್ಣವಾಗಿ ನಾಶವಾಗಿದ್ದು, ಅದರಲ್ಲಿದ್ದ ಯಾರೂ ಬದುಕುಳಿಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಅಜಿತ್‌ ಪವಾರ್‌ ಆಸ್ಪತ್ರೆ ತಲುಪುವ ಮೊದಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅಧಿಕೃತ ಘೋಷಣೆಯಿನ್ನೂ ಆಗಿಲ್ಲ.





















































 
 
error: Content is protected !!
Scroll to Top