ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಮಾತು

ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನಗಳನ್ನು ‌ಕುರಿತು ಇಂದು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದರು.

ವಿಕಸಿತ ಭಾರತದ ಸಂಕಲ್ಪ ಮತ್ತು ಕಳೆದ ದಶಕದ ಸಾಧನೆಗಳನ್ನು ಅವರು ಈ ಸಂದರ್ಭದಲ್ಲಿ ನೆನಪಿಸಿದರು. ಇದೇ ವೇಳೆ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ‌ಸ್ಮರಿಸಿದ ಅವರು, ಜಾತಿ ಮತಗಳ ಬೇಧವಿಲ್ಲದೆ ಸಮಾನ ಅವಕಾಶಗಳನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಸರ್ಕಾರದ ಮೂಲ ಉದ್ದೇಶ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಕಳೆದ ಹತ್ತು ವರ್ಷಗಳ ಆಡಳಿತದ ಪ್ರಗತಿಯನ್ನು ಅಂಕಿಅಂಶಗಳೊಂದಿಗೆ ವಿವರಿಸಿದ ಅವರು, ಸರ್ಕಾರದ ಜನಪರ ಯೋಜನೆಗಳಿಂದಾಗಿ 25 ಕೋಟಿ ಜನರು ಬಡತನದ ರೇಖೆಯಿಂದ ಮೇಲೆ ಬಂದಿದ್ದಾರೆ ಎಂಬ ಮಹತ್ವದ ಮಾಹಿತಿ ಹಂಚಿಕೊಂಡರು. ಇದು ದೇಶದ ಆರ್ಥಿಕ ಸಬಲೀಕರಣದ ವೇಗಕ್ಕೆ ಸಾಕ್ಷಿಯಾಗಿದೆ ಎಂದರು.





















































 
 

ಭಾರತವು ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ‘ಲಖ್ಪತಿ ದೀದಿ’ ಯೋಜನೆ ಮತ್ತು ಮಹಿಳಾ ಮೀಸಲಾತಿ ಜಾರಿಯಂತಹ ದಿಟ್ಟ ಕ್ರಮಗಳು ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ಥಾನಮಾನವನ್ನು ಆಮೂಲಾಗ್ರವಾಗಿ ಬದಲಿಸುತ್ತಿವೆ ಎಂದು ಅವರು ಶ್ಲಾಘಿಸಿದರು. ಬಡವರ ಸಬಲೀಕರಣ ಮತ್ತು ಸಮಾನತೆಯ ಹಾದಿಯಲ್ಲಿ ಭಾರತವು ಇಂದು ಹಿಂದೆಂದಿಗಿಂತಲೂ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ರಾಷ್ಟ್ರಪತಿಗಳು ಅಭಿಪ್ರಾಯಪಟ್ಟಿದ್ದಾರೆ.

error: Content is protected !!
Scroll to Top