ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೇನೆಪೊಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯು ವಿವಿಧ ಯುವತಿಯರೊಂದಿಗೆ ಚಕ್ಕಂದವಾಡಿ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಸವದ್ ಸ್ನೇಹಿತರೇ ಈ ವಿಡಿಯೋಗಳನ್ನು ವೈರಲ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.





















































 
 

ಇದರ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಹಲ್ಲೆ ನಡೆದಿರುವ ವಿಡಿಯೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಹಲ್ಲೆಗಳು ಸವದ್ ಕಡೆಯವರಿಂದ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಹಲ್ಲೆಗೆ ಒಳಗಾದ ಯುವಕರು ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಲಾಗುತ್ತಿದ್ದು, ಸತ್ಯಾಂಶ ಬಯಲಿಗೆಳೆಯಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಹೇಳಿದ್ದಾರೆ.

error: Content is protected !!
Scroll to Top