ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು

ಆನ್‌ಲೈನ್‌ ಬೆಟ್ಟಿಂಗ್‌ ಮೂಲಕ 2,300 ಕೋ. ರೂ. ಅಕ್ರಮ ಎಸಗಿರುವ ಶಾಸಕ

ಬೆಂಗಳೂರು: ಅಕ್ರಮ ಬೆಟ್ಟಿಂಗ್ ವ್ಯವಹಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ 177 ಕೋ. ರೂ. ಮೌಲ್ಯದ ಆಸ್ತಿಯನ್ನುಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರ ಒಟ್ಟು 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಈ ಮೂಲಕ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿದ್ದ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ ಕೊಟ್ಟಿದೆ.

ಆನ್​ಲೈನ್​ ಬೆಟ್ಟಿಂಗ್ ಹಗರಣ ಸಂಬಂಧ ಇ.ಡಿ ಅಧಿಕಾರಿಗಳು ವೀರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ಮಾಡಿತ್ತು. ಆಗ ವವೀರೇಂದ್ರ ಪಪ್ಪಿ ಅವರನ್ನು ಬಂಧಿಸಿ ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿತ್ತು. ಇದೀಗ ಮತ್ತೆ ಅಕ್ರಮ ಹಣದಿಂದ ಸಂಪಾದನೆ ಮಾಡಿದ ಕೃಷಿ ಜಮೀನು, ನಿವೇಶನ ಸೇರಿ 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.





















































 
 

ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಆನ್ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ತನಿಖೆ ವೇಳೆ ಹಗರಣದಲ್ಲಿ ಕೆ.ಸಿ.ವೀರೇಂದ್ರ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು ಗೊತ್ತಾಗಿದೆ. ನೂರಾರು ಮ್ಯೂಲ್ ಅಕೌಂಟ್ ಬಳಸಿ ಅಕ್ರಮ ಹಣ ವರ್ಗಾವಣೆ ಪತ್ತೆಯಾಗಿದೆ. ತನಿಖೆ ವೇಳೆ ಸಿಕ್ಕ ಈ ಎಲ್ಲ ಸಾಕ್ಷ್ಯಗಳ ಆಧಾರದ ಮೇಲೆ ಕೆ.ಸಿ ವೀರೇಂದ್ರ ಪಪ್ಪಿಯ ಆಸ್ತಿ ಜಪ್ತಿ ಮಾಡಲಾಗಿದೆ.

ಈ ಹಿಂದೆ ಪ್ರಕರಣ ಸಂಬಂಧ 60ಕ್ಕೂ ಹೆಚ್ಚು ಸ್ಥಳದಲ್ಲಿ ದಾಳಿ ನಡೆಸಿದ್ದ ಇಡಿ, ಚಿನ್ನ,ನಗದು,ಬೆಳ್ಳಿ, ವಾಹನಗಳನ್ನ ವಶಪಡಿಸಿಕೊಂಡಿತ್ತು. ಒಟ್ಟಾರೆ ಪ್ರಕರಣದಲ್ಲಿ ಇಲ್ಲಿವರೆಗೂ 320 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಹಗರಣದಲ್ಲಿ 2,300 ಕೋಟಿ ರೂಪಾಯಿ ಅಧಿಕ ಅಕ್ರಮ ನಡೆದಿರುವುದು ಪತ್ತೆಯಾಗಿದ್ದು, ಈ ಸಂಬಂಧ ಇ.ಡಿ ತನಿಖೆ ಮುಂದುವರೆಸಿದೆ.

error: Content is protected !!
Scroll to Top