ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳ ಕಾಲ ನಡೆದ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮದ ಸಮಾರೋಪ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಶಾಲಿನಿ ಶೆಟ್ಟಿ ವಹಿಸಿದ್ದರು.
ಅಳಿಕೆ ವಲಯಧ್ಯಕ್ಷ ರಾಜೇಂದ್ರ ರೈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಳಿಯ ಒಕ್ಕೂಟ ಅಧ್ಯಕ್ಷ ಉದಯ್ ನಾಯ್ಕ್ ಅವರು ಮುಂದೆಯು ಇಂತಹ ಕಾರ್ಯಕ್ರಮ ನಡೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತರಬೇತಿ ಪಡೆದವರು ಅನಿಸಿಕೆ ವ್ಯಕ್ತಪಡಿಸಿದರು.
ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಯಿತು.
ಈ ಸಂದರ್ಭ ತಾಲ್ಲೂಕು ಯೋಜನಾಧಿಕಾರಿ ಸುರೇಶ, ತಾಲ್ಲೂಕು ವಿಚಕ್ಷಣಧಿಕಾರಿ ಕವಿತಾ ವಸಂತ, ಟೈಲರಿಂಗ್ ಶಿಕ್ಷಕಿ ಸರೋಜಿನಿ, ಕೇಂದ್ರದ ಸದಸ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯಧಿಕಾರಿ ದೀಪ ಸ್ವಾಗತಿಸಿ, ಮೇಲ್ವಿಚಾರಕಿ ಮೀನಾಕ್ಷಿ ನಿರೂಪಿಸಿದರು. ಸೇವಾಪ್ರತಿನಿಧಿ ವಿನಯ ವಂದಿಸಿದರು.
























