ನಿರ್ಮಾಣ ಹಂತದ ತಡೆಗೋಡೆ ಕುಸಿತ: ಓರ್ವ ಮೃತ್ಯು

ಬೆಳ್ತಂಗಡಿ: ಉಜಿರೆ – ಸುರ್ಯ ರಸ್ತೆಯಲ್ಲಿನ ನಿರ್ಮಾಣ ಹಂತದಲ್ಲಿರುವ ತಡೆಗೋಡೆಯೊಂದು ‌ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಚ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಬಿಹಾರ ಮೂಲದ ರಾಕೇಶ್ ಕುಮಾರ್ (25) ಎಂದು ಗುರುತಿಸಲಾಗಿದೆ.

ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಕುಸಿದು ರಾಕೇಶ್ ಅವರು ಮಣ್ಣಿನಡಿ ‌ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ಅವರನ್ನು ಅಲ್ಲಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಅವರು ಮೃತಪಟ್ಚಿದ್ದಾರೆ.





















































 
 

ಈ ದುರಂತದಲ್ಲಿ ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top