ಚಿಕ್ಕಮಗಳೂರು: ಪಿಕಪ್ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಶಿನಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಚಂದ್ರಿಕಾ (40) ಎಂಬವರೇ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಏಕಾಏಕಿ ಅವರ ಮೇಲೆ ಪಿಕಪ್ ಹರಿದು ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗಮಿಸಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಸದ್ರಿ ಅಪಘಾತ ಸಂಭವಿಸುತ್ತಿರುವ ಬಗ್ಗೆ ಸಿ.ಟಿ. ರವಿ ಅವರ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲ. ಘಟನೆ ನಡೆದ ತಕ್ಷಣ ಸರ್ಕಾರಿ ಆಂಬ್ಯುಲನ್ಸ್ ಸಹ ಬಂದಿಲ್ಲ. ಜೀವಕ್ಕೆ ಬೆಲೆ ಎನ್ನುವುದೇ ಇಲ್ಲದಂತಾಗಿದೆ. ನಾವು ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದ ಘಟನೆ ಸಹ ನಡೆಯಿತು.
























