ಉಭಯ ದೇಶಗಳಿಗೆ ಲಾಭ ಎಂದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಯುರೋಪಿಯನ್ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತದ ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಸುಂಕವನ್ನು ಗಣನೀಯವಾಗಿ ಕಡಿತ ಮಾಡಿದೆ.
ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಏರಿದ ಬಳಿಕ ಪ್ರತಿ ಅಮೆರಿಕ ತೆರಿಗೆ, ರಷ್ಯಾದಿಂದ ಕಚ್ಚಾತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡ ಸೇರಿದಂತೆ ಭಾರತದ ವಸ್ತುಗಳಿಗೆ ಅಮೆರಿಕ 50% ಸುಂಕವನ್ನು ವಿಧಿಸಿತ್ತು. ಈ ಟ್ರಂಪ್ ಈಗ 18% ಮಾತ್ರ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಟ್ರಂಪ್ ನಿರ್ಧಾರದಿಂದ ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ, ಮಲೇಷ್ಯಾಕ್ಕೆ ಹೋಲಿಸಿದರೆ ಭಾರತದ ಮೇಲೆ ಕಡಿಮೆ ತೆರಿಗೆ ಬಿದ್ದಿದೆ.
ಟ್ರಂಪ್ ಸುಂಕ ಕಡಿತಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ ಸುಂಕ ಕಡಿತದಿಂದ ಉಭಯ ದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ. ಅಮೆರಿಕ ಜೊತೆಗೆ ಹೊಸ ಒಪ್ಪಂಡ ಏರ್ಪಟ್ಟ ಬೆನ್ನಿಗೆ ಷೇರು ಮಾರುಕಟ್ಟೆ ಚೇತರಿಸಿಕೊಂಡಿದೆ.
























