ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪುತ್ತೂರು: ಕಳೆದ ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ಮ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲೀಕ ಗಣೇಶ್ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಲೈಟಿಂಗ್ಸ್ ‌ಸಂಬಂಧಿಸಿದ ಕೆಲಸಕ್ಕೆ ಡಿ. 6 ರಂದು ಬದಿಯಡ್ಕಕ್ಕೆ ತೆರಳಿದ್ದ ಅವರು ಸ್ಕೂಟರ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.





















































 
 
error: Content is protected !!
Scroll to Top