ಧರ್ಮಸ್ಥಳ ಪ್ರಕರಣ : ಕುಸುಮಾವತಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ಸೌಜನ್ಯ ತಾಯಿ ಕುಸುಮಾವತಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ಫೆ.3ರಂದು ವಿಚಾರಣೆಗೆ ಬಂದಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ 19ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನಾಪತ್ತೆ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ಆಕ್ಷೇಪವಿಲ್ಲ. ಈ ಬಗ್ಗೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸುವುದಾಗಿ ತಿಳಿಸಿದರು. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆ.19ಕ್ಕೆ ಮುಂದೂಡಿದೆ.

error: Content is protected !!
Scroll to Top