ಗ್ರಾಹಕನ ಸೋಗಿನಲ್ಲಿ ಚಿನ್ನ ಕದ್ದವ ಸೆರೆ

ಬಂಟ್ವಾಳ : ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಚಿನ್ನದ ಅಂಗಡಿಯೊಂದರಿಂದ ಒಂದು ವಾರದ ಹಿಂದೆ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ಗ್ರಾಮದ ನಿವಾಸಿ ರಮೇಶ್ (42) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಸುಮಾರು 1.25 ಲಕ್ಷ ರೂಪಾಯಿ ಮೌಲ್ಯದ 9 ಗ್ರಾಂ ತೂಕದ ಚಿನ್ನದ ಸರ ಮತ್ತು 33,000 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಭೇಟಿ ನೀಡಿದ್ದನು. ಸಿಬ್ಬಂದಿಯ ಬಳಿ ಚಿನ್ನದ ಸರಗಳನ್ನು ತೋರಿಸುವಂತೆ ಕೇಳಿದ್ದ ಆತ ಎಲ್ಲರೂ ಕಾರ್ಯನಿರತರಾಗಿದ್ದ ಸಂದರ್ಭ 9 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.





















































 
 
error: Content is protected !!
Scroll to Top