ಸರ್ವಿಸ್‌ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲು

ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.

ವಿಜಯಪುರ ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಎಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವೀಸ್ ಸೆಂಟರ್ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಕಾರುಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





















































 
 

ಘಟನೆ ಸಮಯದಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿರುವ ಕಾರಣ ಸಾವುನೋವು ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top