ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

ನಿರುದ್ಯೋಗಿ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಅವಕಾಶ

ಮಂಗಳೂರು: ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ವತಿಯಿಂದ ಫೆ.21ರಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ ಪುತ್ತೂರು ಇಲ್ಲಿ ಆಯೋಜಿಸಲಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ.





















































 
 

ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡ ಯುವಜನರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಲು ಸರ್ಕಾರ/ಸರ್ಕಾರೇತರ ಸಂಘ ಸಂಸ್ಥೆಗಳ ಮೂಲಕ ಮತ್ತು ವಿವಿಧ ಯೋಜನಾ ಅನುಷ್ಠಾನ ಸಂಸ್ಥೆಗಳ ಮೂಲಕ ಯೋಜನೆಯನ್ನು ಅನಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ 60:40ರ ಅನುಪಾತದಲ್ಲಿ ಅನುದಾನ ಬಿಡುಗಡೆ ಮಾಡುತ್ತದೆ. ಇದು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಸಂಪೂರ್ಣ ಉಚಿತವಾಗಿದೆ.

ಪ್ರಸ್ತುತ ಜಿಲ್ಲಾಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡುವುದು ದೀನದಯಾಳ್‌ ಉಪಾದ್ಯಾಯ ಗ್ರಾಮೀಣ ಕೌಶಲ ಯೋಜನೆ ಕಾರ್ಯಕ್ರಮದ ವಾರ್ಷಿಕ ಯೋಜನೆಯ ಉಪಕ್ರಮವಾಗಿದ್ದು, ಈ ಕಾರ್ಯಕ್ರಮದ ಉದ್ದೇಶ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೌಶಲಯುತ ಯುವ ಜನರಿಗೆ ಉದ್ಯೋಗ ಕಲ್ಪಿಸುವುದು. ಈ ಮೂಲಕ ಅವರ ಜೀವನ ಮಟ್ಟವನ್ನು ಸುಧಾರಿಸಿ ಆರ್ಥಿಕ ಪರಿಸ್ಥಿತಿಯನ್ನು ಅಭಿವೃದ್ಧಿಪಡಿ ಸುವುದಾಗಿದೆ.

ಈ ಕಾರ್ಯಕ್ರಮದ ಮೂಲಕ ಉದ್ಯಮದಾರರು, ಕಾರ್ಯಕ್ರಮ ಅನುಷ್ಠಾನ ಸಂಸ್ಥೆಗಳು ಹಾಗೂ ಗ್ರಾಮೀಣ ಯುವಜನರನ್ನು ಒಂದೆಡೆಯಲ್ಲಿ ಸೇರಿಸಲು ಸೂಕ್ತ ವೇದಿಕೆಯಾಗಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಡಿಡಿಯು-ಜಿಕೆವೈ ಎನ್ಆರ್‌ಎಲ್‌ಎನ್ ಯೋಜನೆಯಡಿ ಈ ಮೇಳಕ್ಕೆ ಬೆಂಗಳೂರು, ಮಂಗಳೂರು ಮತ್ತು ಐ.ಟಿ, ಸಾಫ್ಟ್‌ವೇರ್, ಆಟೋಮೊಬೈಲ್, ಬ್ಯಾಂಕ್, ಹಣಕಾಸು, ಸೇವಾ ವಲಯ, ರಿಟೈಲ್, ಶಿಕ್ಷಣ, ವೈದ್ಯಕೀಯ ಸೇರಿದಂತೆ 80ಕ್ಕೂ ಅಧಿಕ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿಯಿಂದ ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮ, ಇಂಜಿನಿಯರಿಂಗ್, ನರ್ಸಿಂಗ್, ಪಾರಾ ಮೆಡಿಕಲ್ ಕೋರ್ಸ್ ಮಾಡಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸುರ್ವಣಾವಕಾಶ, ಉದ್ಯೋಗಾಂಕ್ಷಿಗಳು ಭಿತ್ತಿಪತ್ರದಲ್ಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ತಮ್ಮ ಹೆಸರು ಮತ್ತು ವಿವರವನ್ನು ನೋಂದಣಿ ಮಾಡಲು ಕೋರಲಾಗಿದೆ ಎಂದವರು ಮಾಹಿತಿ ನೀಡಿದರು.

error: Content is protected !!
Scroll to Top